ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ

IMG-20230428-WA0082
Published on

ಚನ್ನರಾಯಪಟ್ಟಣ: ಬಿಜೆಪಿ ಬೆಂಬಲಿಸುವ ಮೂಲಕ ತಾಲೂಕಿನಲ್ಲಿ ಇತಿಹಾಸ ಸೃಷ್ಟಿಸಲು ಮತದಾರರು ಕಾರಣೀಭೂತರಾಗಬೇಕು ಎಂದು ಬಿಜೆಪಿ ಅಭ್ಯರ್ಥಿ ಸಿ.ಆರ್.ಚಿದಾನಂದ್ ಹೇಳಿದರು.


ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಒಳಗೇರಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಆದರೆ, ಈ ಬಾರಿ ಮತದಾರ ಬದಲಾಗಿದ್ದಾನೆ. ತಾಲೂಕಿನಲ್ಲಿ ಇತಿಹಾಸ ಸೃಷ್ಟಿಸುವ ಸಂದರ್ಭ ಬಂದಿದೆ. ಹೀಗಾಗಿ ಎಲ್ಲರೂ ಬಿಜೆಪಿಗೆ ಮತ ನೀಡಬೇಕು. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಬೆಂಬಲಿಸಬೇಕು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿಯೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮನೆ ಮಾತಾಗಿದೆ. ಆದ್ದರಿಂದ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.


ಪ್ರದೀಪ್ ಕುಮಾರ್, ಗಂಗಾಧರ್, ಸದಾನಂದ, ಛಾಯಾಕೃಷ್ಣ, ಕುಸುಮಾ, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net