

ವಿಜಯವಾಣಿ ಸುದ್ದಿಜಾಲ ಕಾರವಾರ: ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ಚಿತ್ತಾಕುಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಕೋಟಿ ರೂ.ಮೊತ್ತದ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಸಹಕಾರಿಯಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಜನಪ್ರತಿನಿಧಿಗಳು, ಅಧಿಕಾರಿಗಳೊಟ್ಟಿಗೆ ಜನರೂ ಸಹಕಾರ ನೀಡಬೇಕು. ಗ್ರಾಪಂ ಸದಸ್ಯರು ತಮ್ಮ ಅವಧಿ ಮುಗಿದಿದೆ ಎಂದು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು.
ಗ್ರಾಪಂ ಅಧ್ಯಕ್ಷ ರಾಜು ತಾಂಡೇಲ, ಮುಖಂಡರಾದ ಪಿ.ಎಂ.ರಾಣೆ, ಉದಯ ರಾಣೆ, ಪ್ರಣವ ರಾಣೆ, ಚಂದನ ಸಾವಂತ, ತುಕಾರಾಂ ಚೆಂಡೆಕರ್, ದಿನೇಶ ಬಿಣಗೆ, ಅನಿಲ ಮಾಜಾಲಿಕರ್ ಇದ್ದರು.