ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸಬಾರದು, ಸಚಿವ ಎಂಟಿಬಿ ಅಭಿಮತ, ವಿವಿಧೆಡೆ ಕಾಮಗಾರಿಗಳಿಗೆ ಭೂಮಿಪೂಜೆ

1
Published on

ಬೆಂಗಳೂರು ಗ್ರಾಮಾಂತರ: ಚುನಾವಣೆಗಷ್ಟೇ ರಾಜಕೀಯ ಸೀಮಿತವಾಗಬೇಕು. ಬಳಿಕ ಅಭಿವೃದ್ಧಿಯಷ್ಟೇ ಜನಪ್ರತಿನಿಧಿಯ ಜಪವಾಗಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ಹೊಸಕೋಟೆ ತಾಲೂಕು ಜಡಿಗೇನಹಳ್ಳಿ ಹೋಬಳಿಯ ಗೊಟ್ಟಿಪುರದಲ್ಲಿ ಭಾನುವಾರ ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದಡಿ 40 ಲಕ್ಷ ರೂ. ವೆಚ್ಚದ ಸಿಮೆಂಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 5 ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಆ ವೇಳೆಯಷ್ಟೇ ರಾಜಕೀಯಕ್ಕೆ ಮಹತ್ವ ಕೊಡಬೇಕು. ಬಳಿಕ ಎಲ್ಲವನ್ನು ಮರೆತು ಮತ ಹಾಕಿದ ಜನರ ಋಣ ತೀರಿಸುವ ಕೆಲಸ ಮಾಡಬೇಕು, ಸರ್ಕಾರದ ಯೋಜನೆಗಳ ಬಗ್ಗ ಸಮಾಜದ ಕಟ್ಟಕಡೆಯ ವ್ಯಕ್ತಿಯಲ್ಲಿಯೂ ಅರಿವು ಮೂಡಿಸಬೇಕು ಎಂದರು.

ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಾಲನೆ ನೀಡಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಲಪ್ರದವಾಗಿದೆ, ರಾಜ್ಯದಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.

ಜಡಿಗೇನಹಳ್ಳಿ ಹೋಬಳಿಯ ಎಂ.ಹೊಸಹಳ್ಳಿ ಗ್ರಾಮ ಮತ್ತು ಕಸಬಾ ಹೋಬಳಿಯ ದಾಸರಹಳ್ಳಿ ಗ್ರಾಮದಲ್ಲೂ ಸಿಮೆಂಟ್‌ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net