ಅಭಿವೃದ್ಧಿಯಿಂದ ಬಿಜೆಪಿಗೆ ಗೆಲುವು

9-22
ಹುಕ್ಕೇರಿಯ ಕೋರ್ಟ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಮತ್ತು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತ್ತೆಪ್ಪ ನಾಯಿಕ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪರಗೌಡ ಪಾಟೀಲ, ರಾಜೇಶ ಮುನ್ನೋಳಿ, ಪ್ರಜ್ವಲ ನಿಲಜಗಿ ಇತರರು ಇದ್ದರು.
Published on

ಹುಕ್ಕೇರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶ್ರಮ ಮತ್ತು ಅಭಿವೃದ್ಧಿ ಕಾರ್ಯಗಳಿಂದ 7ನೇ ಬಾರಿಗೆ ಗುಜರಾತ ವಿಧಾನಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಸ್ಥಳೀಯ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ ರಾಜ್ಯ ರಾಜಕೀಯ ಇತಿಹಾಸದಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸಿದ ಗರಿಮೆ ಬಿಜೆಪಿಗಿದೆ. ಗುಜರಾತ್ ವಿಧಾನಸಭೆಯಲ್ಲಿ ವಿರೋಧ ಪಕ್ಷ ಇಲ್ಲದಂತೆ ಅಲ್ಲಿನ ಜನತೆ ಮಾಡಿದ್ದಾರೆ. ಇದರಿಂದ ಪ್ರಧಾನಿ ಮೋದಿ ಅವರ ಜನಪ್ರಿಯತೆ ಗೊತ್ತಾಗುತ್ತದೆ. ಮುಂಬರುವ ದಿನಗಳಲ್ಲಿ ಕರ್ನಾಟಕ ಸೇರಿದಂತೆ ಪಂಚರಾಜ್ಯಗಳ ಚುನಾವಣೆಯಲ್ಲಿಯೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net