ಅಮಚವಾಡಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

22Rajesh6
Published on

ಚಾಮರಾಜನಗರ: ತಾಲೂಕಿನ ಅಮಚವಾಡಿಯಲ್ಲಿ ಗ್ರಾಮಸ್ಥರ ನಿದ್ದೆಗೆಡೆಸಿ ಭೀತಿ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಗ್ರಾಮದ ಜಮೀನಿನೊಂದರದಲ್ಲಿ ಇಟ್ಟಿದ್ದ ಬೋನಿಗೆ ಮಂಗಳವಾರ ಮುಂಜಾನೆ ಚಿರತೆ ಸೆರೆಯಾಗಿದೆ. ಕೆಲವು ದಿನಗಳಿಂದ ಅಮಚವಾಡಿ ಬಳಿ ಚಿರತೆ ಓಡಾಡುತ್ತಿರುವುದಾಗಿ ಹೇಳಲಾಗುತ್ತಿತ್ತು. ರೈತ ಹನುಮಂತಶೆಟ್ಟಿ ಸಾಕಿದ್ದ ಕರುವನ್ನು ಚಿರತೆ ಬೇಟೆಯಾಡಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಯಂತೆ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನು ಇಟ್ಟಿದ್ದರು. ಕೊನೆಗೂ ಚಿರತೆ ಸೆರೆ ಸಿಕ್ಕಿದೆ. ವಿಷಯ ತಿಳಿದ ಗ್ರಾಮಸ್ಥರು ಚಿರತೆ ನೋಡಲು ತಂಡೋಪತಂಡವಾಗಿ ಆಗಮಿಸಿದರು. ಬೋನಿನಲ್ಲಿದ್ದ ಗಂಡು ಚಿರತೆಯನ್ನು ಅರಣ್ಯಾಧಿಕಾರಿಗಳು ಕಾಡಿಗೆ ಬಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net