ಅಮೃತ್ ಸರೋವರ ದಡದಲ್ಲಿ ದಿನಾಚರಣೆ

amruth saraovar
Published on

ಮಡಿಕೇರಿ: ವಿಶ್ವ ಪರಿಸರ ದಿನದ ಅಂಗವಾಗಿ ವಿರಾಜಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ದಿಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಲಾಯಿತು.


ಮನರೇಗಾ ಸಹಾಯಕ ನಿರ್ದೇಶಕ ಎಂ.ಡಿ.ಶ್ರೀನಿವಾಸ್ ಅವರು ಗಿಡಗಳನ್ನು ಸಾಂಕೇತಿಕವಾಗಿ ನೆಡುವುದರ ಮೂಲಕ ಚಾಲನೆ ನೀಡಿ, ನೀರಿನ ಸಂರಕ್ಷಣೆ ಹಾಗೂ ಉಳಿವಿಗಾಗಿ ಮನರೇಗಾ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೆರೆಗಳ ದಡದಲ್ಲಿ ಅಲಂಕಾರಿಕ ಹಾಗೂ ನೆರಳು ನೀಡುವ ಸಸಿಗಳನ್ನು ಬೆಳೆಸುವುದು ಸೂಕ್ತವಾಗಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಹುದಿಕೇರಿ ಅಧ್ಯಕ್ಷೆ ಕಾವೇರಮ್ಮ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಅನೀಲ್, ತಾಂತ್ರಿಕ ಸಹಾಯಕ ಅಭಿಯಂತರರಾದ ನಿರಂಜನ್, ಹೇಮಂತ್, ತಾಲೂಕು ಸಂಯೋಜಕರಾದ ನರೇಂದ್ರ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net