ಅಮಿತ್ ಷಾ ಹೇಳಿಕೆ ವಿರೋಧಿಸಿ ಚಾಮರಾಜನಗರ ಬಂದ್

IMG-20241231-WA0001
Published on

ಚಾಮರಾಜನಗರ: ಕೇಂದ್ರ ಸಚಿವ ಅಮಿತ್ ಷಾ ಅವರ ರಾಜೀನಾಮೆಗೆ ಒತ್ತಾಯಿಸಿ ದಲಿತ, ಪ್ರಗತಿಪರ ಮತ್ತು ಇನ್ನಿತರೆ ಸಂಘಟನೆಗಳು ಚಾಮರಾಜನಗರ ಬಂದ್ ಗೆ ಕರೆ ನೀಡಿದ್ದು, ಮಂಗಳವಾರ ವಿವಿಧ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಮುಂಜಾನೆಯೇ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಜಮಾಯಿಸಿ ಪ್ರತಿಭಟನೆಯನ್ನು ಆರಂಭಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್ ಷಾ ಅವರು ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರದ ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಡಿವಿಯೇಷನ್ ರಸ್ತೆ, ಬಿ.ರಾಚಯ್ಯ ಜೋಡಿ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ಪ್ರಮುಖ ವೃತ್ತಗಳಾದ ಶ್ರೀ ಭುವನೇಶ್ವರಿ ವೃತ್ತ, ಸಂತೇಮರಹಳ್ಳಿ ವೃತ್ತ, ಗುಂಡ್ಲುಪೇಟೆ ಸರ್ಕಲ್ ಹಾಗೂ ಇನ್ನಿತರೆ ವೃತ್ತಗಳಲ್ಲಿ ಟೀ ಅಂಗಡಿಗಳನ್ನು ಹೊರತುಪಡಿಸಿ, ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ದಲಿತ ಮುಖಂಡರು ಶಾಂತಿಯುವ ಪ್ರತಿಭಟನೆಗೆ ಕರೆ ನೀಡಿದ್ದು, ಮಧ್ಯಾಹ್ನದ ವೇಳೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net