

ಹಾಸನ: ಪ್ರಧಾನ ನರೇಂದ್ರ ಮೋದಿಯವರು ದೇಶಾದ್ಯಂತ ಸೋಮವಾರ ಅಮೃತ್ ಭರತ್ ಸ್ಟೇಷನ್ ಯೋಜನೆಯಲ್ಲಿ ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಾಸನ ಮತ್ತು ಸಕಲೇಶಪುರ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕಾಮಗಾರಿಗೆ ಸಚಿವರಾದ ಎಚ್.ಡಿ.ರೇವಣ್ಣ ಹಾಗು ಎಂ.ಪಿ.ರೇಣುಕಾಚಾರ್ಯ ಅವರು ಶಿಲಾನ್ಯಾಸ ನೆರವೇರಿಸಿದರು.
ದೇಶಾದ್ಯಂತ ಸೋಮವಾರ 554 ರೈಲ್ವೆ ನಿಲ್ದಾಣಗಳು ಮತ್ತು 1500 ರಸ್ತೆ ಮೇಲ್ಸೇತುವೆ, ವಿವಿಧ ಕೆಳ ಸೇತುವೆಗಳ ಕಾಮಗಾರಿಗಳಿಗೆ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಿದರು. ಅದರಲ್ಲಿ ಮೈಸೂರು ವಿಭಾಗದ 12 ನಿಲ್ದಾಣಗಳ ಪೈಕಿ ಜಿಲ್ಲೆಯ ಸಕಲೇಶಪುರ, ಹಾಸನ ರೈಲ್ವೆ ನಿಲ್ದಾಣಗಳ ಕಾಮಗಾರಿಗು ಶಂಕುಸ್ಥಾಪನೆ ನೆರವೇರಿಸಿ, ಮೋದಿ ಅವರ ಭಾಷಣದ ಮಾಡಿದರು.
ನಂತರ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಕಾಂಗ್ರೆಸ್ ಆಡಳಿತಾವಧಿಯಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಿರಲಿಲ್ಲ.ಆದರೆ ಪ್ರಧಾನಿ ಅವರ ಆಡಳಿತದಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಈಗ ಮತ್ತೆ ದೇಶಾದ್ಯಂತ 41 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಮೋದಿ ಅವರು ದಿಟ್ಟ ಕ್ರಮ ಕೈಗೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಸನದಿಂದ ಮೈಸೂರಿಗೆ ಹೆಚ್ಚಿನ ರೈಲು ಸಂಚಾರ ಮತ್ತು ಹಾಸನದಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭವಾಗಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪ್ರಯತ್ನದಿಂದ ಎಂದರು.
ಜಿಲ್ಲೆಯ ಅಭಿವೃದ್ಧಿಗೆ ಈಗಿನ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂ. ಅನುದಾನ ನೀಡಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಜೆಜೆಎಂ ಹೀಗೆ ಅನೇಕ ಕಾಮಗಾರಿಗೆ ಅನುದಾನ ಸಿಕ್ಕಿದೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮ ಆರಂಭಕ್ಕು ಮೊದಲು ವಿವಿಧ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ನಗರಸಭೆ ಮಾಜಿ ಅಧ್ಯಕ್ಷ ಮೋಹನ್, ರೈಲ್ವೆ ಇಲಾಖೆ ಚೀಪ್ ಮೆಡಿಕಲ್ ಸೂಪರಿಡೆಂಟ್ ಕೃಷ್ಣಾರೆಡ್ಡಿ, ಹಿರಿಯ ವ್ಯವಸ್ಥಾಪಕ ಲೋಹಿತೇಶ್ವರ್ ಇತರರು ಹಾಜರಿದ್ದರು.