ಅಯೋಧ್ಯೆಗೆ ತೆರಳಿದ ದಾವಣಗೆರೆ, ಚಿತ್ರದುರ್ಗದ ಶ್ರೀಗಳು

79195f46-697d-4801-aa61-b775b88ad3e5--008
Published on

ಚಿತ್ರದುರ್ಗ:ಅಯೋಧ್ಯೆ ಶ್ರೀರಾಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು,ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಪ್ರಮುಖರ ಮಠಾಧೀಶರು ಶನಿವಾರ ಬೆಳಗ್ಗೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳಿದರು.
ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಸ್ವಾಮಿಜಿ, ಚಿತ್ರದುರ್ಗ ಶ್ರೀ ಮಾದಾರ ಚನ್ಯಯ್ಯ ಗುರುಪೀಠದ ಶ್ರೀ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ.
ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ,ಹರಿಹರ ರಾಜನಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀವಾಲ್ಮೀಕಿ ಪ್ರಸನ್ನಾನಂದಸ್ವಾಮಿಜಿ, ಹರಿಹರ ಪಂಚಮಸಾಲಿ ಗುರುಪೀಠದ ಶ್ರೀ ಜಗದ್ಗುರು ಶ್ರೀವಚನಾನಂದ ಸ್ವಾಮೀಜಿ, ಹಾಗೂ ಹೊಸದುರ್ಗ ತಾಲೂಕು ಮಧುರೆ ಭಗೀರಥ ಗುರುಪೀಠದ ಶ್ರೀ ಜಗದ್ಗುರು ಶ್ರೀ ಪುರುಷೋತ್ತಾಮಾನಂದ ಪುರಿ ಸ್ವಾಮೀಜಿ ಅವರು ಅಯೋಧ್ಯೆಗೆ ಪ್ರಯಾಣಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net