ಅರಕಲಗೂಡು ಪಪಂ ಉಪಾಧ್ಯಕ್ಷರಾಗಿ ರಶ್ಮಿ ಆಯ್ಕೆ

27ark3
Published on


ಅರಕಲಗೂಡು: ಇಲ್ಲಿನ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಎಚ್.ಎಸ್.ರಶ್ಮಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿದ್ದ ಲಕ್ಷ್ಮೀ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ರಶ್ಮಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಯಾಗಿದ್ದ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್ ಅವಿರೋಧ ಆಯ್ಕೆ ಪ್ರಕಟಿಸಿದರು.

ಪಪಂ ಅಧ್ಯಕ್ಷೆ ಶಾರದಾ, ಮುಖ್ಯಾಧಿಕಾರಿ ಶಿವಕುಮಾರ್ ಹಾಗೂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net