ಅರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ

04-08-Shiva-3
ಉತ್ತರ ಕರ್ನಾಟಕದ ಜನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಶ್ರೀನಿವಾಸಗೆ ಜಯ ಕರ್ನಾಟಕ ಸಂಘಟನೆಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ಶಿವಕುಮಾರ ಯಾದವ, ಪದಾಕಾರಿಗಳಾದ ಎಂ.ಡಿ.ರಫೀಕ್, ರವಿಕುಮಾರ, ಕರುಣಾಕರರೆಡ್ಡಿ ಇದ್ದರು.
Published on

ರಾಯಚೂರು: ಉತ್ತರ ಕರ್ನಾಟಕದ ಜನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಜಯ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.
ಸಂಘಟನೆ ನಿಯೋಗ ಸ್ಥಳೀಯ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಇಲ್ಲಿನ ಜನರ ಬಣ್ಣದ ಬಗ್ಗೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಈಶ್ವರ ಖಂಡ್ರೆ ಬಗ್ಗೆ ಕೀಳಾಗಿ ಮಾತನಾಡಿರುವುದು ತೀವ್ರ ಖಂಡನೀಯ ಎಂದು ತಿಳಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಉತ್ತರ ಕರ್ನಾಟಕದಲ್ಲಿ ಜನರು ಬಿಸಿಲಿಗೆ ಕರಕಲಾಗಿದ್ದು, ಅದಕ್ಕೆ ಮಲ್ಲಿಕಾರ್ಜುನ ಖರ್ಗೆ ಉದಾಹರಣೆಯಾಗಿದ್ದಾರೆ. ಈಶ್ವರ ಖಂಡ್ರೆ ತಲೆ ಮೇಲೆ ಹೆಚ್ಚಿನ ಕೂದಲು ಇದ್ದರಿಂದ ಪಾರಾಗಿದ್ದಾರೆ ಎಂದು ವರ್ಣಬೇಧ ನೀತಿ ಪರವಾಗಿ ಮಾತನಾಡಿರುವುದು ನಾಚಿಕೆಗೇಡಿನ ವಿಷಯವಾಗಿದೆ.
ಕೂಡಲೇ ರಾಜ್ಯಪಾಲರು ತಮ್ಮ ಸ್ಥಾನದ ಘನತೆ, ವೌಲ್ಯಗಳನ್ನು ಕಾಪಾಡುವಲ್ಲಿ ವಿಲವಾಗಿರುವ ಅರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಶಿವಕುಮಾರ ಯಾದವ, ಪದಾಕಾರಿಗಳಾದ ಎಂ.ಡಿ.ರಫೀಕ್, ರವಿಕುಮಾರ, ಕರುಣಾಕರರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net