ಅರಣ್ಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

2hos2p haratalu halappa
ಗುಡ್ಡೆಕೊಪ್ಪದಲ್ಲಿ ಬಡರೈತನ ವಾಸದ ಮನೆ ತೆರವು ಕುರಿತು ಮಾಜಿ ಶಾಸಕ ಹರತಾಳು ಹಾಲಪ್ಪ ಅರಣ್ಯಾಕಾರಿಗಳ ಜತೆ ಸಮಾಲೋಚನೆ ನಡೆಸಿದರು.
Published on

ಹೊಸನಗರ: ಅರಣ್ಯ ಒತ್ತುವರಿ ಜಾಗ ತೆರವು ನೆಪದಲ್ಲಿ ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಅರಣ್ಯ ಇಲಾಖೆಯ ಅಕಾರಿಗಳು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಒತ್ತುವರಿ ಜಾಗ ತೆರವು ನೆಪದಲ್ಲಿ ಬಡ ರೈತನ ಮನೆಯಲ್ಲಿದ್ದ ಸಾಮಗ್ರಿಗಳನ್ನ ರಸ್ತೆಗೆ ಎಸೆದಿದ್ದಾರೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಚೇರಿಗೆ ತೆರಳಿ ಅಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮನುಷ್ಯತ್ವ ಇರುವ ಯಾವೊಬ್ಬ ಅಕಾರಿಯು ಇಂತಹ ಕೆಲಸ ಮಾಡುವುದಿಲ್ಲ. ಮೇಲಕಾರಿಗಳ ಗಮನಕ್ಕೆ ತಾರದೆ ಎಫ್‌ಐಆರ್ ದಾಖಲಿಸಿ ಅಕಾರಿಗಳು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮಳೆಗಾಲದ ಸಂದರ್ಭದಲ್ಲಿ ಅವರು ವಾಸವಿದ್ದ ಮನೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಮಾನವೀಯ ದೃಷ್ಟಿಯಿಂದ ಮಳೆಗಾಲ ಮುಗಿಯುವವರೆಗೆ ಅವರಿಗೆ ಅವಕಾಶ ನೀಡಬಹುದಾಗಿತ್ತು. ಅರಣ್ಯ ಇಲಾಖೆಯ ಅಕಾರಿಗಳು ಹೇಳುವಂತೆ ಎಲ್ಲವೂ ಕಾನೂನಿನಡಿಯಲ್ಲಿ ಆಗುವುದಾದರೆ ಮಲೆನಾಡು ಭಾಗದಲ್ಲಿ ಯಾವೊಬ್ಬ ರೈತನೂ ಬದುಕಲು ಸಾಧ್ಯವಿಲ್ಲ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ದೇವಾನಂದ್, ಗಣಪತಿ ಬೆಳಗೋಡು, ಹಾಲಗದ್ದೆ ಉಮೇಶ್, ಮೋಹನ್ ಮಂಡಾನಿ, ಗಣೇಶ್ ಹಿರೇಮಣತಿ, ಅಭಿಲಾಶ್, ಬಸವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net