

ಧಾರವಾಡ: ಕೋವಿಡ್ ಹರಡುವಿಕೆ ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಅರಣ್ಯ, ಅಬಕಾರಿ ಇಲಾಖೆ ಸಹಯೋಗದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ವಿವಿಧೆಡೆ ಭಾನುವಾರ ಜನಜಾಗೃತಿ ನಡೆಸಲಾಯಿತು.
ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೋವಿಡ್ ಜಾಗೃತಿ ನಡೆಸಿದರು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಪರಸ್ಪರ ಅಂತರ ಕಾಪಾಡುವುದು ಮುಖ್ಯ ಎಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಮನಕೂರ್, ಇತರರು ಇದ್ದರು.