ಅರಣ್ಯ ಪ್ರದೇಶಕ್ಕೆ ಬೆಂಕಿ

19 HANUR 4
ದೊಡ್ಡಮಾಲಾಪುರ ಗ್ರಾಮ ಸಮೀಪದ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ ತಗುಲಿರುವುದು.
Published on

 ಹನೂರು: ತಾಲೂಕಿನ ದೊಡ್ಡಮಾಲಾಪುರ ಗ್ರಾಮ ಸಮೀಪದ ಬಿಆರ್‌ಟಿ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶಕ್ಕೆ ಬುಧವಾರ ಬೆಂಕಿ ತಗುಲಿ ಸುಮಾರು 10 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಆಹುತಿಯಾಗಿದೆ.

15 ದಿನದ ಹಿಂದೆ ಈ ಭಾಗದ ಲೊಕ್ಕನಹಳ್ಳಿ ಸಮೀಪದ ಕಂಡಯ್ಯನಪಾಳ್ಯ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ನಂದಿಸಿದ್ದರು. ಬುಧವಾರ ಬೆಳಗ್ಗೆ ದೊಡ್ಡಮಾಲಾಪುರ ಸಮೀಪದ ದೊಡ್ಡಗುಡ್ಡ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿಯನ್ನು ನಂದಿಸಲು ಮುಂದಾಗಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಆರ್‌ಎಫ್‌ಒ ವಾಸು ನೇತೃತ್ವದಲ್ಲಿ ಸಿಬ್ಬಂದಿ ತಂಡ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತ ತಡೆಗಟ್ಟಿದ್ದಾರೆ. ಬೆಂಕಿ ಅವಘಡದಿಂದ ಕುರುಚಲು ಸಸ್ಯಗಳು ಹಾಗೂ ಮರಗಿಡಗಳು ನಾಶವಾಗಿದೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net