ಅರಬೈಲ್ ಘಟ್ಟದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

02 YLP 02
Published on

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಉರುಳಿ ಬಿದ್ದಿದೆ. ಚೆನ್ನೈನಿಂದ ಗೋವಾಕ್ಕೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ಚಾಲಕ- ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ರಸ್ತೆ ಬದಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿರುವುದರಿಂದ ಇತರ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಮಂಗಳೂರಿನಿಂದ ತಜ್ಞರ ತಂಡ ಬಂದ ನಂತರ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net