ಅರಬೈಲ್ ಘಟ್ಟದಲ್ಲಿ ಹೊತ್ತಿ ಉರಿದ ಲಾರಿ

04 ylp 01 (benki)
Published on

ಯಲ್ಲಾಪುರ: ಟಯರ್ ಬ್ಲಾಸ್ಟ್ ಆಗಿದ್ದರಿಂದ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಸಂಭವಿಸಿದೆ.

ಮುಂಬೈನಿಂದ ಕೇರಳ ಕಡೆಗೆ ಹೊರಟಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗಿದೆ. ತಕ್ಷಣ ಲಾರಿಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿದೆ. ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮದಳದ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದ್ದಾರೆ. ಹೆದ್ದಾರಿ ಮಧ್ಯೆ ಲಾರಿ ಹೊತ್ತಿ ಉರಿಯುತ್ತಿದ್ದ ಕಾರಣ ವಾಹನಗಳ ಸಂಚಾರಕ್ಕೆ ಒಂದೆರಡು ತಾಸು ತೊಂದರೆ ಉಂಟಾಯಿತು. ಬೆಂಕಿ ಆರಿಸಿದ ನಂತರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net