ಅರಸೀಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

20arsph1ep,,,,,,
ಅರಸೀಕೆರೆಯ ಬಸವೇಶ್ವರ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಚಂದ್ರಕಲಾ, ಡಿ.ಆರ್.ಸುಧಾ, ಸರೋಜಮ್ಮ, ಗೀತಾ, ಜಿವಿಟಿ ಬಸವರಾಜು, ಪುರುಷೋತ್ತಮ್, ಅಣ್ಣಾಯ್ಕನಹಳ್ಳಿ ವಿಜಯಕುಮಾರ್, ಚೇತನ್ ಜೈನ್, ಸುನೀಲ್ ಶಾಸ್ತ್ರಿ ಇತರರಿದ್ದರು.
Published on


ಅರಸೀಕೆರೆ: ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಮಂಡಿಸುವ ಮೂಲಕ ನಾರಿ ಶಕ್ತಿಗೆ ಬಲ ತುಂಬುವ ಕೆಲಸ ಮಾಡಿದೆ ಎಂದು ಬಿಜೆಪಿ ಮುಖಂಡ ಜಿವಿಟಿ ಬಸವರಾಜು ಹೇಳಿದರು.

ನಗರದ ಬಸವೇಶ್ವರ ವೃತ್ತದಲ್ಲಿ ತಾಲೂಕು ಬಿಜೆಪಿ ಮಹಿಳಾ ಘಟಕದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡರೂ ಮಹಿಳಾ ಮೀಸಲಾತಿ ಜಾರಿ ಸಾಧ್ಯವಾಗಿರಲಿಲ್ಲ. 12ನೇ ಶತಮಾನದ ಬಸವಾದಿ ಶಿವಶರಣರು ಹಾಕಿಕೊಟ್ಟ ಸಮಾನತೆ ಪರಿಕಲ್ಪನೆಯ ಹಾದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಸ್ತ್ರೀಯರ ಸಂಖ್ಯೆ ಹೆಚ್ಚಳವಾಗಲಿದ್ದು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಐತಿಹಾಸಿಕ ನಿರ್ಧಾರ ಸಕಾಲಿಕ ಹಾಗೂ ಸ್ವಾಗತಾರ್ಹವಾಗಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಚಂದ್ರಕಲಾ, ನಗರಾಧ್ಯಕ್ಷೆ ಡಿ.ಆರ್.ಸುಧಾ, ಗ್ರಾಮಾಂತರ ಮಂಡಲಾಧ್ಯಕ್ಷೆ ಸರೋಜಮ್ಮ, ಗೀತಾ, ನಗರಾಧ್ಯಕ್ಷ ಪುರುಷೋತ್ತಮ್, ಮುಖಂಡರಾದ ಅಣ್ಣಾಯ್ಕನಹಳ್ಳಿ ವಿಜಯಕುಮಾರ್, ಚೇತನ್ ಜೈನ್, ಸುನೀಲ್ ಶಾಸ್ತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net