

ಚಾಮರಾಜನಗರ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಸಿಇಟಿ/ಎನ್‌ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಎಚ್.ಡಿಯಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ವಾರ್ಷಿಕ 1 ಲಕ್ಷ ರೂ. ಗಳನ್ನು ಶೇ. 2ರ ಬಡ್ಡಿದರದಲ್ಲಿ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ. ಮಿತಿಯೊಳಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ಅ.31ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಯನ್ನು ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯ ಕೊಠಡಿ ಸಂಖ್ಯೆ 305 ರಲ್ಲಿರುವ ಕಚೇರಿಯಲ್ಲಿ ಪಡೆಯಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.