ಬಳ್ಳಾರಿ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಅಥವಾ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ ಹಾಗೂ ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.ಅರ್ಜಿದಾರರು ಅ. 30ರೊಳಗಾಗಿ ನಿಗಮದ ವೆಬ್‌ಸೈಟ್‌ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ 08392-271741, ಅಥವಾ ಲಿಡ್ಕರ್ ಕಚೇರಿ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.