

ಧಾರವಾಡ: ಶಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅ. 30ರೊಳಗೆ ಹುಬ್ಬಳ್ಳಿ, ಧಾರವಾಡ ಶಹರ ಯೋಜನಾ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ಹುಬ್ಬಳ್ಳಿ ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.