ಅರ್ಜಿ ಆಹ್ವಾನ

Adarsha Shakshaka Prashasti Application
Published on

ತುಮಕೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ ಪ್ರತಿ ಮಾಹೆ 2500 ರೂ. ಶಿಷ್ಯ ವೇತನ ಹಾಗೂ ಹಣ ಪಾವತಿಸುವ ಆಧಾರದ ಮೇರೆಗೆ ವಸತಿ ನಿಲಯದ ಸೌಲಭ್ಯ ಕಲ್ಪಿಸಲಾಗುವುದು.

ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಆಂಗ್ಲ ಭಾಷೆ ಒಂದು ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2024ರ ಜುಲೈ 1ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಹಾಗೂ 15 ರಿಂದ 25 ವರ್ಷ ವಯೋಮಿತಿಯೊಳಗಿನ ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆಸಕ್ತ ಅಭ್ಯರ್ಥಿಗಳು ಮೇ.31ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102 ಇವರಿಗೆ ಸಲ್ಲಿಸಬೇಕು.

ಮಾಹಿತಿಗೆ ಉಪನಿರ್ದೇಶಕ, ಕೈಮಗ್ಗ ಮತ್ತು ಜವಳಿ ಇಲಾಖೆ, ತುಮಕೂರು ದೂ.0816-2275370 ಅಥವಾ ಪ್ರಾಂಶುಪಾಲರು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ ಬೆಟಗೇರಿ ದೂ.08372-297221 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net