ಬಳ್ಳಾರಿ : ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪ್ರಕಟಣಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಟ್ಟಡದಲ್ಲಿನ ಪ್ರವಾಸೋದ್ಯಮ ಇಲಾಖೆಯ ತಾತ್ಕಾಲಿಕ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅ.08ರೊಳಗಾಗಿ ಸಲ್ಲಿಸಬೇಕು. ಮಾಹಿತಿಗೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಅಥವಾ ದೂ.08394-295640 ಗೆ ಸಂಪರ್ಕಿಸಬಹುದು.