ಅರ್ಜಿ ಆಹ್ವಾನ

Published on

ಬಳ್ಳಾರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನಾನಾ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಹುದ್ದೆಯಾದ ಉಪ ಮುಖ್ಯ ಕಾನೂನು ಅಭಿರಕ್ಷಕರ ಹುದ್ದೆಗಳು 02, ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳು 05, ಕಚೇರಿ ಸಹಾಯಕ ಹುದ್ದೆಗಳು 02 ಮತ್ತು ಜವಾನ ಹುದ್ದೆಗಳು 02 ಇವುಗಳಿಗೆ ಗುತ್ತಿಗೆ ಆಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್ ಹೊಸಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net