ಅರ್ಜಿ ಸಲ್ಲಿಕೆ ಅವಧಿ ಫೆ.20 ರವರೆಗೆ ವಿಸ್ತರಣೆ

Application
Published on

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ಏರ್ಪಡಿಸಿರುವ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನಕ್ಕಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆ.20 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಛಾಯಾಚಿತ್ರಗಳನ್ನು ಕಳುಹಿಸಲು ಫೆ. 15 ಕೊನೆ ದಿನಾಂಕವಾಗಿತ್ತು. ಉಳಿದಂತೆ ಸ್ಪರ್ಧೆಯ ನಿಯಮ ಸೇರಿದಂತೆ ಯಾವುದರಲ್ಲೂ ಬದಲಾವಣೆ ಮಾಡಿಲ್ಲ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000 ರೂ., 25,000 ರೂ. ಹಾಗೂ 15,000 ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net