

ಚಿತ್ರದುರ್ಗ:ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿ ಮಾಜಿ ಸೈನಿಕರು,ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಆದ್ಯತೆಯೊಂದಿಗೆ ಸೀಟು ಹಂಚಿಕೆ ನಡೆಯಲಿದೆ. ಇದಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಘೆಉಉ)ಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲ ತಾಣದ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.11ರವರೆಗೆ ವಿಸ್ತರಿಸ ಲಾಗಿದೆ. ಹೆಚ್ಚಿನ ಮಾಹಿತಿಗೆ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರ ಕಚೇರಿ(08182-220925)ಯ ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.