

ಚಿತ್ರದುರ್ಗ: ಪ್ರಸಕ್ತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ನೇರಸಾಲ ಯೋಜನೆ-ಕುರಿ ಸಾ ಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಪುಡ್‌ಕಾರ್ಟ್ ಯೋಜನೆಗಳಿಗೆ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.29ರವರೆಗೆ ವಿಸ್ತರಿಸಲಾಗಿದೆ. 2022-23 ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ವಿಲ್ಲವೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.
-----