ಅರ್ಥಪೂರ್ಣ ಸ್ವಾತಂತ್ರ್ಯ ಆಚರಣೆಗೆ ಸಿದ್ಧತೆ

indian flag
Published on

ಬೆಳಗಾವಿ: ಜಿಲ್ಲಾಡಳಿತದಿಂದ ಆಗಸ್ಟ್ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರೃ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ಕಡೆಗಳಲ್ಲೂ ಧ್ವಜಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ವಿವಿಧ ಸಮಿತಿ ರಚಿಸಲಾಗಿದ್ದು, ಎಲ್ಲ ಸಮಿತಿಗಳು ಜವಾಬ್ದಾರಿ ಅರಿತು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಧ್ವಜ ಬಳಕೆ ಆಗದಂತೆ ನಿಗಾವಹಿಸಬೇಕು ಎಂದು ಸೂಚಿಸಿದರು. ಯಾವುದೇ ಕಾರಣಕ್ಕೂ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು.

ಗಣ್ಯ ವ್ಯಕ್ತಿಗಳಿಗೆ ಆಸನದ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ವೃತ್ತ ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಗಮಿಸುವ ಮಕ್ಕಳಿಗೆ ಸೂಕ್ತ ಸಾರಿಗೆ ಹಾಗೂ ಉಪಹಾರದ ವ್ಯವಸ್ಥೆ ಮಾಡಬೇಕು. ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಪಥ ಸಂಚಲನಕ್ಕೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net