ಅರ್ಥಪೂರ್ಣವಾಗಿ ಆಚರಿಸಿ

16 YERRISWAMY 04
Published on

ಬಳ್ಳಾರಿ : ಜಿಲ್ಲಾಡಳಿತದಿಂದ ಶಿವಶರಣ ಶ್ರೀಹಡಪದ ಅಪ್ಪಣ್ಣ ಜಯಂತಿಯನ್ನು ಜು.21 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಎಡಿಸಿ ಮೊಹಮ್ಮದ್ ಝುಬೇರ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ನಡೆದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೆಳಗ್ಗೆ 10.30 ಕ್ಕೆ ನಗರದ ಎಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಇದಕ್ಕೆ ಬೇಕಾದ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆಗೆ ವಾಹನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಸೂಚಿಸಿದರು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಶಿವಶರಣರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಮತ್ತು ಕಲಾವಿದರಿಂದ ವಚನ ಗಾಯನವನ್ನು ಆಯೋಜಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಸಮಾಜದ ಮುಖಂಡರು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net