ಅರ್ನಬ್ ಬಂಧನ ಖಂಡಿಸಿ ಪ್ರತಿಭಟನೆ

dinada chitra1
Published on

ಬೀದರ್: ಹಿರಿಯ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಶಾಖೆಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ತುರ್ತು ಪರಿಸ್ಥಿತಿ ದಿನಗಳು ನೆನಪಿಸುವಂತೆ ಮಾಡಲಾಗಿದೆ. ಬಂಧನ ಕಾನೂನು ಬಾಹಿರವಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮಕ್ಕೆ ಆಘಾತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೇಡಿಕೆ ಕುರಿತು ಜಿಲ್ಲಾಡಳಿತ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸುಳ್ಳು ಕೇಸ್ ದಾಖಲಿಸಿದ ಕಾರಣ ಗೋಸ್ವಾಮಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು. ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಎಸಗಿರುವ ಮಹಾರಾಷ್ಟ್ರ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಗಿದೆ. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಮರ್ ಸುಲ್ತಾನಪುರೆ, ನಗರ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಅನಿಲ ಚೌದರಿ, ನಾಗೇಶ ಬಿರಾದಾರ, ಅರವಿಂದ ಸುಂದಳಕರ್, ಸಂಜು ಜೀರ್ಗೆ, ಸಾಯಿ ಮೂಲಗೆ, ರವಿ ಕೊಡಗೆ, ವಿಶಾಲ ಅತಿವಾಳ, ಬಾಲಾಜಿ ಪಾಟಿಲ್, ಶರಣು ಬಿರಾದಾರ, ಉಮೇಶ ತೇಲಂಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net