

ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳ ಲಾಭ ತಲುಪಿಸಲು ಪ್ರ ಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಪದಾಧಿಕಾರಿಗಳು,ಕಾಂಗ್ರೆಸ್ ಕಾರ‌್ಯಕರ್ತರಿಗೆ ಶಾಸಕ ಕೆ.ಸಿ.ವಿರೇಂದ್ರಪಪ್ಪಿ ಸೂ ಚಿಸಿದರು.
ನಗರದ ತಾಪಂ ಕಚೇರಿಯಲ್ಲಿ ಬುಧವಾರ ಸಂಜೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಸಮಿತಿ ಕಚೇರಿ ಉದ್ಘಾಟಿಸಿ ಮಾ ತನಾಡಿ,ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿದರು.ಕುಡಾ ಅಧ್ಯಕ್ಷ ಎಂ.ಕೆ.ತಾಜ್‌ಪೀರ್,ಸಮಿತಿ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ,ಮುದಸಿರ್‌ನವಾಜ್,ಕುಮಾರಸ್ವಾಮಿ, ರಮೇಶ್,ಅಶೋಕ್ ನಾಯ್ಡು,ಸಾಧಿಕ್,ದಿನೇಶ್,ಮಂಜುನಾಥ್,ಹನೀಫ್,ಪ್ರಕಾಶ್ ರಾಮನಾಯ್ಕಾ,ವಿನಯಕುಮಾರ್ ಮತ್ತಿತರರು ಇದ್ದರು.