

ರಾಮದುರ್ಗ: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳು ಪಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸರ್ಕಾರದ ಬೆಂಬಲ ಬೆಲೆಯ ಹೆಸರು ಕಾಳು ಹಾಗೂ ಸೂರ್ಯಕಾಂತಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ರೈತರ ಸಲು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ನೋಂದಣಿ ಕಾರ್ಯ ಮುಕ್ತಾಯವಾಗಿದ್ದು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ನೋಂದಣಿ ಅವಧಿ ವಿಸ್ತರಣೆಗೆ ಕ್ರಮ ವಹಿಸಲಾಗುವುದು. ಯೋಜನೆ ದುರುಪಯೋಗ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂದ ಉಪಾಧ್ಯ ಪಿ.ಎಂ. ಜಗತಾಪ ಮಾತನಾಡಿ, ಮಾರುಕಟ್ಟೆಯಲ್ಲಿ ಬೆಳೆಗಳಿಗೆ ಸ್ಥಿರವಾದ ಬೆಲೆ ಇಲ್ಲವಾದ್ದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ರೈತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು. ಸಹಾಯಕ ಕೃಷಿ ನಿರ್ದೇಶಕ ಎಸ್.ಎ್. ಬೆಳವಟಗಿ, ಎಪಿಎಂಸಿ ಕಾರ್ಯದರ್ಶಿ ಎಸ್.ಜಿ. ಮಠ, ತುಳಜಪ್ಪ ನಡಗಡ್ಡಿ ಇತರರಿದ್ದರು.