ಅಲಯನ್ಸ್ ವಿವಿಯಲ್ಲಿ ಕನ್ನಡ ರಾಜ್ಯೋತ್ಸವ

2
Published on

ಆನೇಕಲ್: ಪಟ್ಟಣಕ್ಕೆ ಸಮೀಪದ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಶನಿವಾರ ಸಾಹಿತಿ ಬಿ.ಟಿ.ಲಲಿತಾ ನಾಯಕ್ ಉದ್ಘಾಟಿಸಿದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜಿಸಲಾಗಿತ್ತು. ಡೊಳ್ಳು ಕುಣಿತ, ಯಕ್ಷಗಾನ, ತಮಟೆ ಸೇರಿ ವಿವಿಧ ಜಾನಪದ ಕಲಾತಂಡಗಳು ರಾಜ್ಯೋತ್ಸವಕ್ಕೆ ಮೆರಗು ನೀಡಿದವು. ಸಾಹಿತಿ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ಪ್ರತಿಯೊಬ್ಬರಿಗೂ ಮಾತೃಭಾಷೆಯ ಮೇಲೆ ತಮ್ಮದೇ ಆದ ಪ್ರೀತಿಯಿರುತ್ತದೆ. ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡದ ಮೇಲೇ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯಿರುತ್ತದೆ. ಕನ್ನಡ ಭಾಷೆ ಒಂದು ಶಕ್ತಿಯಾಗಿದೆ ಎಂದರು. ಭಾಷೆಯ ಪ್ರಭಾವದಿಂದಾಗಿ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ಕರ್ನಾಟಕದಲ್ಲಿರುವ ಅನ್ಯಭಾಷಿಕರು ಕನ್ನಡವನ್ನು ಕಲಿಯಬೇಕು. ಈ ಭಾಷೆಯ ಆನಂದವನ್ನು ಆಸ್ವಾದಿಸಬೇಕು. ಮನಸ್ಸಿನ ಭಾವನೆಗಳನ್ನು ತಿಳಿಸಲು ಕನ್ನಡ ಅತ್ಯಂತ ಸುಂದ ಭಾಷೆಯಾಗಿದೆ. ಯುವಕರು ಕರ್ನಾಟಕದಲ್ಲಿನ ಪ್ರವಾಸಿತಾಣಗಳಿಗೆ ಭೇಟಿ ನೀಡಿ ಇಲ್ಲಿನ ವೈವಿಧ್ಯತೆಯ ಬಗ್ಗೆ ಮಾಹಿತಿ ಪಡೆಯಬೇಕು. ಮನುಷ್ಯ ಇರುವಷ್ಟು ದಿನ ಮಾನವೀಯತೆಯಿಂದ ಬದುಕಬೇಕು. ವಿದ್ಯಾರ್ಥಿಗಳು ಸಾಹಿತ್ಯ ಮತ್ತು ಸಂಸ್ಕೃತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ಚರ್ಚೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ದೇಶದ ಬಹುತೇಕ ರಾಜ್ಯಗಳ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಕೇಂದ್ರ ಮತ್ತು ಸಾಹಿತ್ಯ ವಿಭಾಗದ ವತಿಯಿಂದ ಕನ್ನಡ ಕಲಿಸುವ ಕಾರ್ಯಕ್ರಮ ರೂಪಿಸಲಾಗುವುದು. ಈ ಮೂಲಕ ಅನ್ಯಭಾಷಿಕ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಲಿಯಲು ಪೂರಕ ಅವಕಾಶಗಳನ್ನು ನೀಡಲಾಗುವುದು. ಮಠಂ ವಿಶ್ವನಾಥಯ್ಯ ಅಲಯನ್ಸ್ ವಿಶ್ವವಿದ್ಯಾಲಯದ ರಿಜಿಸ್ಟರ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net