ಅಲೆಮಾರಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ

Arjun Bhadre
Published on

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಎಸ್ಸಿ ಎಸ್ಟಿ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಪಂಡಿತ ಶಿರವಾಟಿ, ಸಂಚಾಲಕ ಅರ್ಜುನ ಭದ್ರೆ, ಉಪಾಧ್ಯಕ್ಷ ಮಾರುತಿ ಶಿರವಾಟಿ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಅಲೆಮಾರಿ ಸಮುದಾಯಕ್ಕೆ ವಸತಿ, ಭೂಮಿ ಹಂಚಿಕೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ೪೦೦ ಕೋಟಿ ರೂ. ಅನುದಾನ ನೀಡಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿ ಸುಮಾರು ಆರು ಲಕ್ಷ ಅಲೆಮಾರಿಗಳಿದ್ದಾರೆ. ಬಿಜೆಪಿ ಅಲೆಮಾರಿಗಳ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ಸಂಕಷ್ಟದಲ್ಲಿರುವವರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದರು. ಸಂಘದ ಜಿಲ್ಲಾಧ್ಯಕ್ಷ ಪಂಡಿತ ಶಿರವಾಟಿ, ಮಾರುತಿ ಶಿರವಾಟಿ, ಅರ್ಜುನ ಭದ್ರೆ, ಭೀಮಾಶಂಕರ ಕಟ್ಟಿಮನಿ, ಶ್ರೀನಿವಾಸ ಮೂಲೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net