ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ

Application-1-1280x720
Published on

ಕಲಬುರಗಿ: ಅಲೆಮಾರಿ ಹಾಗೂ ಅರೆ-ಅಲೆಮಾರಿ ಅಭಿವೃದ್ದಿ ನಿಗಮದ ೨೦೨೩-೨೪ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಯಡಿಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ (ಈ ಯೋಜನೆಯಡಿ ಕನಿಷ್ಠ ೨ ಎಕರೆ ಜಮೀನು ಹೊಂದಿರಬೇಕು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಅಡಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಅಲೆಮಾರಿ ಮತ್ತು ಅರೆ-ಅಲೆಮಾರಿ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ವಯೋಮಿತಿ ೧೮ ರಿಂದ ೫೫ ವರ್ಷದೊಳಗಿರಬೇಕು.

ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ ನವೆಂಬರ್ ೩ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್, ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪, ೮೦೫೦೭೭೦೦೦೫ ಅಥವಾ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ದೂವಾಣಿ ಸಂಖ್ಯೆ: ೦೮೪೭೨-೨೭೮೬೩೫ ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net