ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕ್ರಮವಹಿಸಿ

Ajheem
Published on

ಚಿತ್ರದುರ್ಗ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಜಾರಿಗೊಳಿಸಿರುವ ಅರಿವು ಸಾಲ, ಶ್ರಮ ಶಕ್ತಿ, ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸೂಚಿಸಿದರು.

ಕೊಳೆಗೇರಿ ನಿವಾಸಿಗಳಿರುವ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್, ನಿವೇಶನ, ಮನೆ ಸೇರಿ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ತಾಕೀತು ಮಾಡಿದರು.

ಕೊಳಚೆ ಪ್ರದೇಶಾಭಿವೃದ್ಧಿ ಸಂಬಂಧ ಜಿಲ್ಲೆಗೆ 5,843 ಮನೆಗಳು ಮಂಜೂರಾಗಿದ್ದು, ಇದರಲ್ಲಿ 3,469 ಮನೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net