ಅಲ್ಪಸಂಖ್ಯಾತರಿಗೆ ಜೆಡಿಎಸ್ ದ್ರೋಹ: ಕೆಪಿಸಿಸಿ ಸದಸ್ಯ ವಿನಯ್ ಗಾಂಧಿ ಆರೋಪ

ಅಲ್ಪಸಂಖ್ಯಾತರಿಗೆ ಜೆಡಿಎಸ್ ದ್ರೋಹ: ಕೆಪಿಸಿಸಿ ಸದಸ್ಯ ವಿನಯ್ ಗಾಂಧಿ ಆರೋಪ
Published on

ಹಾಸನ : ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುತ್ತ ಅಲ್ಪಸಂಖ್ಯಾತರನ್ನು ಮತ ಬ್ಯಾಂಕ್ ಮಾಡಿಕೊಂಡು ಅಧಿಕಾರ ಅನುಭವಿಸಿದ ಜೆಡಿಎಸ್ ಪಕ್ಷ ಈಗ ಬಿಜೆಪಿ ಜತೆಗೆ ಕೈ ಜೋಡಿಸುವ ಮೂಲಕ ಮತದಾರರಿಗೆ ದ್ರೋಹ ಬಗೆದಿದೆ ಎಂದು ಕೆಪಿಸಿಸಿ ಸದಸ್ಯ ವಿನಯ್ ಗಾಂಧಿ ಆರೋಪ ಮಾಡಿದರು.

ಜೆಡಿಎಸ್ ಪಕ್ಷವು ಅಲ್ಪಸಂಖ್ಯಾತರಿಗೆ ಮತ್ತು ದಲಿತರಿಗೆ ಆಸೆ-ಆಮಿಷಗಳನ್ನು ನೀಡುತ್ತ ಶಾಸಕರಿಂದ ಪ್ರಧಾನಿಯವರೆಗೆ ಉನ್ನತ್ತ ಅಧಿಕಾರವನ್ನು ನಿರ್ವಹಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಕೇವಲ 19 ಸ್ಥಾನವನ್ನು ಗಳಿಸಿ ಹೀನಾಯ ಸ್ಥಿತಿಗೆ ಬಂದಿರುವ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾದಳ ಎಂದು ಹೇಳಿಕೊಳ್ಳುವವರು ಬಿಜೆಪಿ ಜತೆ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿದ್ದು, ಇದರಿಂದ ಪಕ್ಷದಲ್ಲಿ ಕಾರ್ಯನಿರ್ವಹಿಸಿದ ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಂತಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿ ಹೇಳಿದರು.

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪಕ್ಷದ ಕಾರ್ಯಕರಿಗೂ, ಮತದಾರರಿಗೂ ಮಹತ್ವ ನೀಡಿಲ್ಲ ಎಂಬುವುದಕ್ಕೆ ಈ ಮೈತ್ರಿಯೇ ಸಾಕ್ಷಿ. ಜೆಡಿಎಸ್ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು, ಮತದಾರರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶೇಖರಪ್ಪ, ಮುನಿಸ್ವಾಮಿ, ಸುರೇಶ್, ಖಲಿಂ ಪಾಷ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net