ಅಳ್ನಾವರದಲ್ಲಿ ರ್ಯಾಪಿಡ್ ಆಂಟಿಜನ್

3-aln-1a
Published on

ಅಳ್ನಾವರ: ಪಟ್ಟಣದ ಪ್ರಮುಖ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ತಾಲೂಕಾಡಳಿತದಿಂದ ಸೋಮವಾರ ರ್ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಲಾಗಿದೆ. 89 ಜನರ ತಪಾಸಣೆ ನಡೆಸಿದ್ದು, 6 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಕೇಂದ್ರಕ್ಕೆ ಕಳುಹಿಸಲಾಯಿತು. ಇನ್ನೂ ನಾಲ್ಕು ದಿನ ಟೆಸ್ಟಿಂಗ್ ನಡೆಸಿ, ಎಲ್ಲ ವ್ಯಾಪಾರಸ್ಥರನ್ನು ತಪಾಸಣೆಗೆ ಒಳಪಡಿಸಲಾಗುವುದು. ಮನೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಲಾಗುವುದು ಪಪಂ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ಹೇಳಿದರು. ತಹಸೀಲ್ದಾರ್ ಅಮರೇಶ ಪಮ್ಮಾರ, ಪಿಎಸ್​ಐ ಶಿವಪ್ಪ ಕಣವಿ, ಆರೋಗ್ಯ ಇಲಾಖೆ ನಿರೀಕ್ಷಕ ಕೆ. ಮಧುಸೂದನ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net