ಅವನತಿಯತ್ತ ಸಾಗಿದೆ ಕಾಂಗ್ರೆಸ್

Bandeppa Kashempur
Published on

ಬಸವಕಲ್ಯಾಣ: ಕರ್ನಾಟಕ ರಾಜ್ಯಕ್ಕೆ ಒಳ್ಳೆಯದಾಗಬೇಕು ಹಾಗೂ ರಾಜಕೀಯ ಬದಲಾವಣೆಯಾಗಬೇಕಾದರೆ ಕಾಂಗ್ರೆಸ್, ಬಿಜೆಪಿಗೆ ಪಾಠ ಕಲಿಸಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಅಧಿಕಾರಕ್ಕೆ ತರಬೇಕು ಎಂದು ಪಕ್ಷದ ಹಿರಿಯ ಮುಖಂಡ, ಶಾಸಕ ಬಂಡೆಪ್ಪ ಖಾಶೆಂಪುರ ಹೇಳಿದರು.

ಉಪ ಚುನಾವಣೆ ನಿಮಿತ್ತ ಬಸವಕಲ್ಯಾಣ ನಗರ, ಹತ್ಯಾಳ, ಹಾರಕೂಡ, ಸಿರಗಾಪೂರ, ಗದಲೇಗಾಂವ, ಮೈಸಲಗಾ ಸೇರಿ ವಿವಿಧೆಡೆ ಭಾನುವಾರ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಪ್ರಚಾರ ನಡೆಸಿ, ರಾಜ್ಯದಿಂದ ಆಯ್ಕೆಯಾದ ಅಷ್ಟೂ ಬಿಜೆಪಿ ಸಂಸದರು ಕರ್ನಾಟಕದ ಪರ ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲ. ಇಂಥವರಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ. ಪ್ರತಿಪಕ್ಷ ಕಾಂಗ್ರೆಸ್ ಸದ್ಯ ದೇಶದಲ್ಲಿ ಅವನತಿಯತ್ತ ಸಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಗಿರಾಕಿಗಳು. ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿದ್ದರೂ ರಾಜ್ಯ ಸರ್ಕಾರದ ಒಂದೇ ಹಗರಣ ಬಯಲಿಗೆಳೆಯಲು ಸಾಧ್ಯವಾಗಿಲ್ಲ ಎಂದರು.

ಜೆಡಿಎಸ್ ಜಿಲ್ಲಾ ಅಧ್ಯಕ್ಷ ರಮೇಶ ಪಾಟೀಲ್ ಸೋಲಪುರ, ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net