ಅವಹೇಳನ ಮಾಡಿದವನ ವಿರುದ್ಧ ಕೇಸ್ ದಾಖಲಿಸಿ

sri manavi
ಶೃಂಗೇರಿ ಪೊಲೀಸ್ ಉಪನಿರೀಕ್ಷಕ ಮಹೇಶ್ ಮೇಲ್‌ಗಿರಿಗೆ ತಾಲೂಕು ಬ್ರಾಹ್ಮಣ ಮಹಾಸಭಾದಿಂದ ಮನವಿ ಸಲ್ಲಿಸಲಾಯಿತು. ಜಿ.ಎಂ.ಸತೀಶ್, ಎಚ್.ಎಸ್.ವೇಣುಗೋಪಾಲ್, ಎಂ.ಎಲ್.ಪ್ರಕಾಶ್, ಹರೀಶ್ ವಿ. ಶೆಟ್ಟಿ ಇತರರಿದ್ದರು.
Published on

ಶೃಂಗೇರಿ: ಸಾಮಾಜಿಕ ಜಾಲತಾಣದಲ್ಲಿ ಹಿಂದು ದೇವರನ್ನು ಅವಹೇಳನ ಮಾಡಿದ ಅಂಜುಂ ಶೇಕ್ ಎಂಬುವನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಪೊಲೀಸ್ ಉಪನಿರೀಕ್ಷಕ ಮಹೇಶ್ ಮೇಲ್‌ಗಿರಿ ಅವರಿಗೆ ತಾಲೂಕು ಬ್ರಾಹ್ಮಣ ಮಹಾಸಭಾದಿಂದ ಮನವಿ ಸಲ್ಲಿಸಲಾಯಿತು.

ಮಹಸಭಾ ಅಧ್ಯಕ್ಷ ಜಿ.ಎಂ.ಸತೀಶ್ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಜಿ.ಎಂ.ಸತೀಶ್, ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ಹಾಗೂ ಗಣಪತಿಯನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಆರೋಪಿಸಿದರು. ಮಹಾಸಭಾ ಪ್ರಧಾನಕಾರ್ಯದರ್ಶಿ ಬಿ.ಎಲ್.ರವಿಕುಮಾರ್, ಪಪಂ ಅಧ್ಯಕ್ಷ ಎಚ್.ಎಸ್.ವೇಣುಗೋಪಾಲ್, ಉಪಾಧ್ಯಕ್ಷ ಎಂ.ಎಲ್.ಪ್ರಕಾಶ್, ಸದಸ್ಯ ಹರೀಶ್ ವಿ. ಶೆಟ್ಟಿ ಹಾಗೂ ಪತ್ರಕರ್ತ ಎಚ್.ಜಿ.ರಾಘವೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net