ಅವ್ಯವಸ್ಥೆ ಸರಿಪಡಿಸುವಂತೆ ವೈದ್ಯರಿಗೆ ಸೂಚನೆ

bkt-2-9
Published on

ಬಾಗಲಕೋಟೆ: ಜಿಲ್ಲಾಸ್ಪತ್ರೆಗೆ ಅಬಕಾರಿ ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಅವರು ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಇಂದು ಬೆಳಗ್ಗೆ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಪ್ರತಿಯೊಂದು ವಿಭಾಗಕ್ಕೆ ತೆರಳಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳ ಕುಶಲೋಪರಿ ವಿಚಾರಿಸಿ, ಕುಂದುಕೊರತೆಗಳನ್ನು ವಿಚಾರಿಸಿದರು. ಒಳ ರೋಗಿಗಳು, ಹೊರ ರೋಗಿಗಳು, ಹೆರಿಗೆಗೆ ಬಂದವರ ಜೊತೆ ಮಾತುಕತೆ ನಡೆಸಿ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ, ವೈದ್ಯರು ಮತ್ತು ಸಿಬ್ಬಂದಿ ಸ್ಪಂದನೆ ಸೇರಿದಂತೆ ವ್ಯವಸ್ಥೆಗಳ ಬಗ್ಗೆ ಸಚಿವ‌ ತಿಮ್ಮಾಪೂರ ವಿಚಾರಿಸಿದರು.

ರಾತ್ರಿ ಪಾಳಿಯ ಎಲ್ಲಾ ವೈದ್ಯರು, ಸಿಬ್ಬಂದಿ ಇಲ್ಲದೆ ಕೇವಲ ಇಬ್ಬರು ಮೂವರು ವೈದ್ಯರಿದ್ದರು ಹಾಗೂ ಬೆಳಗ್ಗೆ ಡ್ಯೂಟಿ ಡಾಕ್ಟರ್ ಕರ್ತವ್ಯಕ್ಕೆ ಆಗಮಿಸದೇ ಸಮಯ ಪಾಲನೆ ಮಾಡದ ವೈದರು ಹಾಗೂ ಸಿಬ್ಬಂದಿಯನ್ನು ಸಚಿವರು ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯಲ್ಲಿರುವ ಎಲ್ಲಾ ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಬೇಕು. ಹೆರಿಗೆಗೆ ಬರುವ ಗರ್ಭಿಣಿಯರು, ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮವಹಿಸಬೇಕು. ಇದೇ ರೀತಿ ನಿರ್ಲಕ್ಷ್ಯ ತೋರುವ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಎಚ್ಚರಿಕೆ ನೀಡಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net