ಅವ್ಯವಹಾರ ಆರೋಪ, ಕಾರ್ಖಾನೆ ತನಿಖೆಗೆ ಆದೇಶ

Published on

ಬೆಳಗಾವಿ: ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಮತ್ತು ಹಣಕಾಸು ವ್ಯವಹಾರಗಳಲ್ಲಿನ ನಿಯಮಬಾಹಿರ ಚಟುವಟಿಕೆ ಹಾಗೂ ಅವ್ಯವಹಾರ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ವಿಚಾರಣಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

2018&19ರಿಂದ 2022&23 ರವರೆಗೆ ನಡೆದಿದೆ ಎನ್ನಲಾದ ಅವ್ಯವಹಾರ, ಸಕ್ಕರೆ ಮಾರಾಟ ಹಾಗೂ ಸಂಗ್ರಹ ಸಾಮಗ್ರಿ ಖರೀದಿಯಲ್ಲಿನ ಅಕ್ರಮ, ಆಡಳಿತಾತ್ಮಕ ಮತ್ತು ಹಣಕಾಸು ವ್ಯವಹಾರದಲ್ಲಿನ ನಿಯಮಬಾಹಿರ ಚಟುವಟಿಕೆ ಕುರಿತು ಎಲ್ಲ ಕಾನೂನಾತ್ಮಕ ಅಂಶಗಳನ್ನೊಳಗೊಂಡು ವಿಸತ ತನಿಖೆ ನಡೆಸುವ ಅಗತ್ಯವಿದೆ ಎಂಬುವುದನ್ನು ಮನಗಂಡು ಸರ್ಕಾರ ಜಂಟಿ ತನಿಖೆಗೆ ಆದೇಶ ಮಾಡಿದೆ.

ಅಕ್ರಮ ಆರೋಪಗಳ ಬಗ್ಗೆ ವಿವರಣೆ ಕೇಳಿ ಸಂಬಂಧಪಟ್ಟವರಿಗೆ ನೋಟಿಸ್​ ಜಾರಿ ಮಾಡಿದ್ದರೂ ಗೈರಾಗಿದ್ದರು. ಹೀಗಾಗಿ ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್​.ಸಿ. ಇಂಗಳಗಿ ಮತ್ತು ಸಹಕಾರ ಇಲಾಖೆ ನಿವೃತ್ತ ಅಪರ ನಿಬಂಧಕ ಎಸ್​.ಎಂ. ಕಲೂತಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲು ಸೂಚನೆ ನೀಡಿದೆ.

ಸಕ್ಕರೆ ಸಚಿವ ಶಿವಾನಂದ ಪಾಟೀಲ ಈಚೆಗೆ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅನಿರೀತ ಭೇಟಿ ನೀಡಿದ ಸಂದರ್ಭದಲ್ಲಿ ಸಕ್ಕರೆ ಇಳುವರಿ ಕಡಿಮೆ ತೋರಿಸಿದರು. ದೊಡ್ಡ ಪ್ರಮಾಣದ ಸಕ್ಕರೆ ದಾಸ್ತಾನನ್ನು ಅಕ್ರಮವಾಗಿ ದಾಸ್ತಾನು ಮಾಡಿ ದುರ್ಬಳಕೆ ಮಾಡಿಕೊಂಡರು. ಈ ಅಕ್ರಮ ಪತ್ತೆ ಮಾಡಿ ಜಿಲ್ಲಾಧಿಕಾರಿಗೆ ದೂರು ನೀಡಿಲಾಗಿತ್ತು. ಇದು ಅಕ್ರಮ ಸಾಬೀತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net