ಅವ್ವಣ್ಯ ಮ್ಯಾಕೇರಿ ಜಿಲ್ಲಾಧ್ಯಕ್ಷ ಆಗಲಿ

oppo_2
oppo_2
Published on

ಕಲಬುರಗಿ: ಕಳೆದ ಎರಡು ದಶಕದಿಂದ ಭಾರತೀಯ ಜನತಾ ಪಕ್ಷದಲ್ಲಿ ಸಕ್ರೀಯವಾಗಿ ಕೆಲಸ ನಿರ್ವಹಿಸುತ್ತಿರುವ ಸಂಘಟಕ, ಹಿಂದುಳಿದ ನಾಯಕ ಅವ್ವಣ್ಣ ಮ್ಯಾಕೇರಿ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದು ಜಿಲ್ಲಾ ಕೋಲಿ, ಕಬ್ಬಲಿಗ ಸಮನ್ವಯ ಸಮಿತಿಯ ಸದಸ್ಯ ಪ್ರೇಮ ಕೋಲಿ ಆಗ್ರಹಿಸಿದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಕೋಲಿ ಸಮಾಜದವರಿದ್ದು, ಈ ಹಿಂದೆ ಜಿಲ್ಲಾಧ್ಯಕ್ಷರ ನೇಮಕದ ವೇಳೆ ಅಂತಿಮ ಮುದ್ರೆ ಬಿದ್ದಿತ್ತು. ಆದರೆ ಕೊನೇ ಘಳಿಗೆಯಲ್ಲಿ ಕೈಬಿಡಲಾಗಿತ್ತು. ಇದೀಗ ಬದಲಾವಣೆಯ ಮಾತುಗಳು ಕೇಳಿ ಬರುತ್ತಿದ್ದು, ಸದಾ ಜನರೊಂದಿಗೆ ಇರುವ, ಹೋರಾಟಗಾರ, ಸಂಘಟನೆಗಾರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಬಿಜೆಪಿಯ ಜಿಲ್ಲಾ, ರಾಜ್ಯ ಮುಖಂಡರು ಈ ಬಗ್ಗೆ ಗಮನ ಹರಿಸಿ, ಮ್ಯಾಕೇರಿ ಅವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಭೋಗೇಶ ಕಿರಸಾವಳಗಿ, ರವಿ ಡೊಂಗರಗಾAವ, ಚಂದ್ರಕಾAತ ಜಮಾದಾರ, ಪರಮೇಶ್ವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net