ಅಶೋಕ ಲೈಲ್ಯಾಂಡ್ ಲಾರಿ ಡಿಕ್ಕಿ; ಬೈಕ್ ಸವಾರ ಸಾವು

Bike Accident
Published on


ರಾಣೆಬೆನ್ನೂರ: ಅಶೋಕ ಲೈಲ್ಯಾಂಡ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ದೇವಗೊಂಡನಕಟ್ಟಿ ಕ್ರಾಸ್ ಬಳಿ ಎನ್‌ಎಚ್-48ರಲ್ಲಿ ಭಾನುವಾರ ಸಂಭವಿಸಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ನಿವಾಸಿ ಶಿವಾನಂದ ಶಿವಲಿಂಗಪ್ಪ ಗೋಕಾರ (30) ಮೃತ ಬೈಕ್ ಸವಾರ.
ಈತ ಹರಿಹರ ಕಡೆಯಿಂದ ರಾಣೆಬೆನ್ನೂರಿಗೆ ಬರುತ್ತಿದ್ದ ಸಮಯದಲ್ಲಿ ಲಾರಿ ಚಾಲಕ ರಾಂಗ್ ಸೈಡ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಾನಂದನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net