ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಶನಿವಾರ ಶ್ರೀಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.
ಶಾಸಕ ಎಂ.ಆರ್.ಮಂಜುನಾಥ್ ಅವರು ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಮಡಿವಾಳ ಮಾಚಿದೇವರು ಕಾಯಕದಲ್ಲಿ ನಿಶ್ಕಲ್ಮಶ ಹಾಗೂ ಪರಿಶುದ್ಧತೆ ಇರಬೇಕು ಎಂದು ಸಮಾಜಕ್ಕೆ ತೋರಿಸಿಕೊಟ್ಟ ಶಿವಶರಣರು. 12ನೇ ಶತಮಾನದಲ್ಲಿ ಸಮಾಜದಲ್ಲಿದ್ದ ಅಸಮಾನತೆಯನ್ನು ಶ್ರಮಿಸಿದ್ದವರಲ್ಲಿ ಇವರೂ ಒಬ್ಬರಾಗಿದ್ದು, ವಚನಗಳನ್ನು ರಚಿಸಿದ್ದಾರೆ. ಹಾಗಾಗಿ ಇವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಎಂದು ತಿಳಿಸಿದರು. ಮುಖಂಡರಾದ ಡಿ.ಆರ್ ಮಾದೇಶ್, ಪುಟ್ಟಸ್ವಾಮಿ, ಮಾದೇಶಯ್ಯ, ಮುರುಗ, ಸಿದ್ದರಾಜು, ಚಿಕ್ಕಮಾದು, ಮಾದೇಶ್, ನಾಗೇಂದ್ರ, ಜಗದೀಶ್ ಮತ್ತಿತರರು ಹಾಜರಿದ್ದರು.