ಅಸ್ಪೃಶ್ಯತೆ ಜೀವಂತ ಕ್ರಮಕ್ಕೆ ಆಗ್ರಹ

N.D.Kumar Congress
Published on

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿಯಲ್ಲಿ ಅನೇಕ ವರ್ಷಗಳಿಂದಲೂ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಕ್ಷೌರ ಮಾಡುವ ಸಂಬಂಧ ಮಾದಿಗರ ಮೇಲೆ ದಬ್ಬಾಳಿಕೆ ನಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಹಿಂದುಳಿದ ವರ್ಗದ ಮುಖಂಡ ಎನ್.ಡಿ.ಕುಮಾರ್ ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿ ಎಂಟ್ಹತ್ತು ದಿನವಾದರೂ ನಾಲ್ವರು ಪ್ರಮುಖ ಆರೋಪಿಗಳನ್ನು ಈವರೆಗೂ ಬಂಧಿಸಿಲ್ಲ. ನೆಪ ಮಾತ್ರಕ್ಕೆ ಕ್ಷೌರಿಕನೊಬ್ಬನನ್ನು ಪೊಲೀಸರು ಬಂಧಿಸಿ ನಿರ್ಲಕ್ಷೆೃ ವಹಿಸಿದ್ದಾರೆ ಎಂದು ಸೋಮವಾರ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

ಮಾದಿಗ ಸಮುದಾಯದವರನ್ನು ವೇತನ ಕೊಟ್ಟು ಕೆಲಸಕ್ಕೆ ಇಟ್ಟುಕೊಂಡಿದ್ದೇವೆ. ಅವರಿಗೆ ಯಾವ ಕಾರಣಕ್ಕೂ ಕ್ಷೌರ ಮಾಡಬಾರದೆಂದು ಬೆದರಿಕೆ ಹಾಕುತ್ತಿರುವ ಪ್ರಮುಖ ಆರೋಪಿತರನ್ನು ಮೊದಲು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಾದಿಗರು ಮತ್ತು ನಾಯಕ ಸಮುದಾಯದವರು ಅಣ್ಣ-ತಮ್ಮಂದಿರಂತೆ ಬದುಕಬೇಕಿದೆ. ಅದಕ್ಕಾಗಿ ಸಮನ್ವಯ ಸಮಿತಿ ರಚಿಸಿ, ಕಾಲುವೆಹಳ್ಳಿಯಲ್ಲಿ ಸಹೋದರತ್ವ ಬೆಸೆಯುವ ಕೆಲಸವಾಗಬೇಕು ಎಂದು ತಿಳಿಸಿದ್ದಾರೆ.

ಸವಿತಾ ಸಮಾಜವನ್ನು ಎಸ್ಸಿಗೆ ಸೇರಿಸಬೇಕು. ಇದರಿಂದ ಸಮುದಾಯಕ್ಕೂ ಅನುಕೂಲ, ಭದ್ರತೆ ದೊರೆಯಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net