

ಚಿತ್ರದುರ್ಗ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಡಿ.23 ರಂದು ಜಿಲ್ಲೆಯ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. 23ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಮೊಳಕಾಲ್ಮುರು ತಾಲೂಕು ಕಚೇರಿಯಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30, ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 5.30, ಪೊಲೀಸ್ ಉಪಾಧೀಕ್ಷಕರು ಅದೇ ದಿನ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30 ರವರೆಗೆ ಹೊಸದುರ್ಗ ತಾಲೂಕು ಕಚೇರಿ, ಮಧ್ಯಾಹ್ನ 2. 30 ರಿಂದ ಸಂಜೆ 5.30ರವರೆಗೆ ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು.
ಪೊಲೀಸ್ ನಿರೀಕ್ಷಕರು 24ರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲೂಕು ಕಚೇರಿಯಲ್ಲಿ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ತಾಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರೆಂದು ಲೋಕಾಯುಕ್ತ ಎಸ್‌ಪಿ ಎನ್. ವಾಸುದೇವರಾಮ ತಿಳಿಸಿದ್ದಾರೆ.