ಅಹಿಂಸಾ ಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ

11 mahaveer jayanthi
Published on

ಆಲೂರು: ಭಗವಾನ್ ಮಹಾವೀರರು ರಾಜ ಭೋಗಗಳನ್ನು ತ್ಯಜಿಸಿ ಅಹಿಂಸಾ ಮಾರ್ಗದ ಮೂಲಕ ಜೀವನ ಸಾಕ್ಷಾತ್ಕಾರಗೊಳಿಸಿದವರು. ಅಂತೆಯೇ ನಾವು ಅಹಿಂಸಾ ಮಾರ್ಗದಲ್ಲಿ ನಡೆದಾಗ ಜೀವನ ಸಾರ್ಥಕವಾಗುವುದು ಎಂದು ತಹಸೀಲ್ದಾರ್ ಮಲ್ಲಿಕಾರ್ಜುನ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ಭಗವಾನ್ ಮಹಾವೀರರ 2624ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜೈನ ಧರ್ಮದ ಮೂಲ ಆಚಾರ-ವಿಚಾರಗಳಲ್ಲಿ ಇಂದು ಕೂಡ ಯಾವುದೇ ಬದಲಾವಣೆ ಆಗಿಲ್ಲ. ಬದುಕುವ ಹಕ್ಕು ಎಲ್ಲ ಜೀವಿಗಳಿಗೂ ಸಮಾನವಾಗಿದೆ. ತಾವೂ ಬದುಕಿ ಇತರ ಜೀವಿಗಳಿಗೂ ಬದುಕಲು ಸಮಾನ ಅವಕಾಶ ನೀಡುವ ಜೈನ ಧರ್ಮ ಶ್ರೇಷ್ಠ ಧರ್ಮವಾಗಿದೆ. ಭಗವಾನ್ ಮಹಾವೀರ ಬೋಧಿಸಿದ ತತ್ವಗಳು ವಿಶ್ವಮಾನ್ಯವಾಗಿದ್ದು, ಸಾರ್ವಕಾಲಿಕ ಮೌಲ್ಯ ಹೊಂದಿವೆ. ಭಗವಾನ್ ಮಹಾವೀರ ಬೋಧಿಸಿದ ಅಹಿಂಸೆ, ಸತ್ಯ, ಅಪರಿಗ್ರಹ, ಅಚೌರ್ಯ, ಬ್ರಹ್ಮಚರ್ಯ ಮೊದಲಾದ ತತ್ವಗಳನ್ನು ನಾವು ನಿತ್ಯವೂ ಜೀವನದಲ್ಲಿ ಅನುಷ್ಠಾನ ಮಾಡಿ ಧರ್ಮ ಮಾರ್ಗದಲ್ಲಿ ನಡೆದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ತನ್ನ ಆತ್ಮ ಕಲ್ಯಾಣದ ಜತೆಗೆ ಇತರ ಸಕಲ ಜೀವಿಗಳ ಕಲ್ಯಾಣದೊಂದಿಗೆ ಲೋಕ ಕಲ್ಯಾಣ ಮಾಡಲು ಜೈನ ಧರ್ಮದಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಬಿಆರ್‌ಸಿ ವಿಜಯ ಕುಮಾರ್, ಶಿರಸ್ತೇದಾರ್ ಅಂಕೇಗೌಡ, ರಾಜಸ್ವ ನಿರೀಕ್ಷಕರಾದ ರಂಗಸ್ವಾಮಿ, ಜ್ಞಾನೇಂದ್ರ, ಚೈತ್ರಾ, ಗೋವಿಂದರಾಜು, ಕಚೇರಿ ಸಿಬ್ಬಂದಿ ಸ್ಫೂರ್ತಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net