

ಚಿಕ್ಕಮಗಳೂರು: ಗಾಂಧೀಜಿ ಸತ್ಯ ಮತ್ತು ಅಹಿಂಸೆ ವಿಚಾರವನ್ನು ಪ್ರತಿಪಾದಿಸುವಲ್ಲಿ ಹೆಸರುವಾಸಿಯಾದರೆ, ಲಾಲ್ ಬಹದ್ದೂರ್ ಶಾಸ್ತಿç ಅವರು ಉನ್ನತ ಹುದ್ದೆಯಲ್ಲಿ ಶಾಂತಿ ವರ್ತನೆ ಮತ್ತು ಸರಳ ಜೀವನಕ್ಕೆ ಹೆಸರುವಾಸಿ ಎಂದು ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಲಕ್ಷö್ಮಣಗೌಡ ತಿಳಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಮಹಾತ್ಮಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತಿçಯವರ ಜನ್ಮದಿನಾಚರಣೆ ಅಂಗವಾಗಿ ಮಹಾನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಉಪ್ಪಿನ ಸತ್ಯಾಗ್ರಹ, ಸ್ವದೇಶಿ ಚಳವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಮಹಾತ್ಮಾ ಗಾಂಧೀಜಿ ಅವರು ಭಾಗವಹಿಸಿ ಹೋರಾಟವನ್ನು ಜನಾಂದೋಲವಾಗಿ ಪರಿವರ್ತಿಸಿದರು. ಜನಸಾಮಾನ್ಯರಿಂದ ಹೋರಾಟ ನಡೆಸಿದರು. ಅನೇಕ ಸತ್ಯಾಗ್ರಹಗಳನ್ನು ಜನಾಂದೋಲದಿAದ ನಡೆಸಿದ ಕೀರ್ತಿ ಗಾಂಧೀಜಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಗಾಂಧೀಜಿ ಅವರಿಂದ ಶಿಸ್ತು ಪಾಲನೆ ಹಾಗೂ ಕೆಲಸದ ನಿಖರತೆ ಕಲಿತರೆ, ಶಾಸ್ತಿç ಅವರಿಂದ ಸಮಯ ಪಾಲನೆ ಹಾಗೂ ಕೆಲಸ ಮುಂದೂಡದೆ ಅಂದೆ ಕೆಲಸವನ್ನು ಮುಗಿಸುವ ಮನಸ್ಥಿತಿಯನ್ನು ಕಲಿಯಬೇಕು. ಇಂಥ ಎಲ್ಲ ಅಂಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ರಾಷ್ಟçದ ಸ್ವಾತಂತ್ರö್ಯಕ್ಕಾಗಿ ಗಾಂಧೀಜಿಯವರು ಅಹಿಂಸಾ ಮಾರ್ಗದಲ್ಲಿ ಸಾಗಿ ಯಶಸ್ಸು ಗಳಿಸಿದರು. ದೇಶದಲ್ಲಿ ಆಳ್ವಿಕೆ ನಡೆಸುತ್ತಿದ್ದ ಬ್ರಿಟಿಷರ ವಿರುದ್ಧ ಶಾಂತಿಯಿAದಲೇ ಹೋರಾಟ ನಡೆಸಿ ಭಾರತೀಯರಿಗೆ ಸ್ವಾತಂತ್ರö್ಯದ ಹಕ್ಕನ್ನು ಕರುಣಿಸಿದರು ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಮಾತನಾಡಿ, ಗಾಂಧೀಜಿ ಅವರು ಸತ್ಯ, ಸ್ವಚ್ಛತೆ ಮತ್ತು ಗ್ರಾಮ ಸ್ವರಾಜ್ಯದ ಸಂಕಲ್ಪಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಭಾರತಕ್ಕೆ ರಾಜಕೀಯ ಸ್ವಾತಂತ್ರö್ಯ ತಂದುಕೊಟ್ಟರು. ಅವರ ರಾಜಕೀಯ ಆಡಳಿತ ವ್ಯವಸ್ಥೆ ನಮಗೆ ಮಾದರಿಯಾಗಿದೆ ಎಂದರು.
ಗಾAಧೀಜಿಯವರು ಸತ್ಯ ಮತ್ತು ಅಹಿಂಸೆ ಮಾರ್ಗದಲ್ಲಿ ಅವರು ನಡೆದವರು. ಪ್ರತಿಯೊಬ್ಬರೂ ಸತ್ಯಾಗ್ರಹ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಗ್ರಾಮ ಸ್ವರಾಜ್ಯದ ಸಂಕಲ್ಪ ಹಾಗೂ ಅಧಿಕಾರ ವೀಕೇಂದ್ರಿಕರಣ ವ್ಯವಸ್ಥೆಗೆ ಬುನಾದಿ ಹಾಕಿದ ಮಹಾನೀಯರು ಗಾಂಧೀಜಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ನಗರ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ಮುಖಂಡರಾದ ಆನಂದೇಗೌಡ, ಮಾನುಮಿರಾಂಡ, ನಾಗರತ್ನ, ಜಯಂತಿ ಮತ್ತಿತರರಿದ್ದರು.