ಆ.10ರಂದು ಜಂತುಹುಳು ನಿರ್ಮೂಲನೆ ಮಾತ್ರೆ ವಿತರಣೆ

Published on

ಮೈಸೂರು: ಜಿಲ್ಲಾ ಆರೋಗ್ಯ ಇಲಾಖೆಯಿಂದ ಆ.10ರಂದು ಜಿಲ್ಲೆಯ ಎಲ್ಲ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು 1 ರಿಂದ 19 ವರ್ಷದ ಎಲ್ಲ ಮಕ್ಕಳಿಗೆ ಮತ್ತು ಹರಿಹರೆಯದವರಿಗೆ ಜಂತುಹುಳು ನಿವಾರಣೆಗೆ ಉಚಿತವಾಗಿ ಅಲ್ಬೆಂಡಝೋಲ್ ಮಾತ್ರೆ ನೀಡಲಾಗುವುದು. ಈ ಮಾತ್ರೆ ಪಡೆಯಲು ವಂಚಿತರಾದ ಮಕ್ಕಳಿಗೆ ಆ.17 ರಂದು ಮತ್ತೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net