

ಚಾಮರಾಜನಗರ: ರಾಜ್ಯದಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆ್ಯಂಡ್ ಆರ್ ಬದಲಾವಣೆ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ.12 ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಹೇಳಿದರು.
ನಗರದ ನ್ಯಾಯಾಲಯದ ರಸ್ತೆಯಲ್ಲಿರುವ ಸಕರ್ಅರಿ ನೌಕರರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಕರ ಬಹುದಿನದ ಬೇಡಿಕೆಯಾದ ಸಿ ಆ್ಯಂಡ್ ಆರ್ ಸಮಸ್ಯೆ ಬಗೆ ಹರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಕರಿಗೆ ಭರವಸೆ ನೀಡಿದ್ದರು. ಆದರೇ ಒಂದು ವರ್ಷ ಕಲೇದರೂ ಇನ್ನೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ.ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆ.12 ಸಂಜೆ 4.30 ಗಂಟೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
ಈ ಬಾರಿಯ ಶಿಕ್ಷಕರ ದಿನಾಚರಣೆಯ ಒಳಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು. ಇಲ್ಲವಾದರೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಿ ನ್ಯಾಯ ಸಿಗುವವರೆಗೂ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು. ಈ ಪ್ರತಿಭಟನೆಯಲ್ಲಿ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಂಘದ ಖಜಾಂಚಿ ಸಲೀನಾ, ಸಂಘಟನಾ ಕಾರ್ಯದರ್ಶಿ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷರಾದ ಸಿ.ಕೆ.ರಾಮಸ್ವಾಮಿ, ಶಿವಪ್ರಸಾದ್, ಕೃಷ್ಣೇಗೌಡ, ಸೋಮಣ್ಣ, ಪದಾಧಿಕಾರಿಗಳಾದ ನಂದೀಶ್, ನಾಗರಾಜು, ನಾಗಸುಂದ್ರ, ಎಂ.ಡಿ.ಮಹದೇವಯ್ಯ, ಭರತ್ ಭೂಷನ್, ಭವಾನಿ ದೇವಿ, ಶಶಿಕಲಾ, ಮಲ್ಲಿಕಾರ್ಜುನ್, ನಟರಾಜು ಹಾಗೂ ಇತರರು ಹಾಜರಿದ್ದರು.